ನ್ಯಾಯಾಲಯದಲ್ಲಿ ಯಾವ ರಾಜಕೀಯ ಪಕ್ಷಗಳಿಲ್ಲ: ಮೀಸಲಾತಿ ತೀರ್ಪಿನ ವಿರುದ್ಧ ವಿಪಕ್ಷಗಳ ಟೀಕೆಗೆ ಸರ್ಕಾರ ತಿರುಗೇಟು

ಉದ್ಯೋಗ ನೇಮಕಾತಿ ವೇಳೆ ಮೀಸಲಾತಿ  ನೀಡುವುದು ಆಯಾ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ತೀರ್ಪು ನಿಡಿದ್ದ ಸುಪ್ರೀಂ ಕೋರ್ಟ್ ನಲ್ಲಿ ಯಾವುದೇ ರಾಜಕೀಯ ಪಕ್ಷ ಕಾರ್ಯಾಚರಿಸುತ್ತಿಲ್ಲ ಎಂದು ಸರ್ಕಾರ ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದೆ.
ಥಾವರ್‌ಚಂದ್ ಗೆಹ್ಲೋಟ್
ಥಾವರ್‌ಚಂದ್ ಗೆಹ್ಲೋಟ್
Updated on

ನವದೆಹಲಿ: ಉದ್ಯೋಗ ನೇಮಕಾತಿ ವೇಳೆ ಮೀಸಲಾತಿ  ನೀಡುವುದು ಆಯಾ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ತೀರ್ಪು ನಿಡಿದ್ದ ಸುಪ್ರೀಂ ಕೋರ್ಟ್ ನಲ್ಲಿ ಯಾವುದೇ ರಾಜಕೀಯ ಪಕ್ಷ ಕಾರ್ಯಾಚರಿಸುತ್ತಿಲ್ಲ ಎಂದು ಸರ್ಕಾರ ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದೆ.

ಸದನದಲ್ಲಿ ಹೇಳಿಕೆ ನೀಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್‌ಚಂದ್ ಗೆಹ್ಲೋಟ್ ಈ ವಿಷಯದ ಬಗ್ಗೆ ಅಫಿಡವಿಟ್ ಸಲ್ಲಿಸಲು ಕೇಂದ್ರವನ್ನು ಸಹ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು. 2012ರಲ್ಲಿ ಉತ್ತರಾಖಂಡ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ ಎಂದು ಅವರು ಹೇಳಿದರು.

ಆದರೆ ಇದು ಲೋಕಸಭೆಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆಗೆ ಕಾರಣವಾಗಿತ್ತು.

ಈ ವಿಷಯವನ್ನು ಸರ್ಕಾರಉನ್ನತ ಮಟ್ಟದಲ್ಲಿ" ಚರ್ಚಿಸುತ್ತದೆಈ ಬಗ್ಗೆ ಸಮಗ್ರ ದೃಷ್ಟಿಕೋನದಿಂದ ತೀರ್ಮಾನಿಸುತ್ತದೆ ಎಂದು ಅವರು ಹೇಳಿದರು.

ಮೀಸಲಾತಿ ಕುರಿತ ಸುಪ್ರೀಂ ತೀರ್ಪನ್ನು ಕುರಿತು ಲೋಕಸಭೆಯಲ್ಲಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದವು. ವಿರೋಧ ಪಕ್ಷಗಳು ಸರ್ಕಾರವನ್ನು ಗುರಿಯಾಗಿಸಿಕೊಂಡು ಮೀಸಲಾತಿ ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಟೀಕಿಸಿದ್ದವು. ಆದಎ ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಸರ್ಕಾರ ಹೇಳಿದೆ.

"ಕಾಂಗ್ರೆಸ್ ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸುತ್ತಿದೆ" ರಕ್ಷಣಾ ಸಚಿವ ಮತ್ತು ಸದನದ ಉಪನಾಯಕ ರಾಜನಾಥ್ ಸಿಂಗ್ ಹೇಳಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಸರ್ಕಾರದ ವಿರುದ್ಧ ವಿರೋಧ ಪಕ್ಷದ ಸದಸ್ಯರು ಮಾಡಿದ ವಾಗ್ದಾಳಿಯ ಹೇಳಿಕೆಗಳನ್ನು ದಾಖಲಿಸಬಾರದೆಂದು ಸಬಾಧ್ಯಕ್ಷ ಓಂ ಬಿರ್ಲಾ ಅವರನ್ನು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಸಭಾಧ್ಯಕ್ಷರು "ಪರಿಶೀಲನೆ ಮಾಡುವುದಾಗಿ" ಹೇಳಿದ್ದಾರೆ.

ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಸ್‌ಸಿ  ಎಸ್‌ಟಿ ಮೀಸಲಾತಿ ಮೇಲೆ ದಾಳಿಯಾಗಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಮತ್ತು ಕಲ್ಯಾಣ್ ಬ್ಯಾನರ್ಜಿ (ಟಿಎಂಸಿ) ಸರ್ಕಾರವನ್ನು ಗುರಿಯಾಗಿಸಿ ಆರೋಪಿಸಿದ್ದಾರೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರು ಮಧ್ಯಾಹ್ನ ಲೋಕಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com