ಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಸ್ಲೀಪರ್​ ಬಸ್​, 16 ಸಾವು, 31 ಮಂದಿಗೆ ಗಾಯ

ಫಿರೋಜಾಬಾದ್​ ಜಿಲ್ಲೆಯ ಲಖನೌ - ಆಗ್ರ ಎಕ್ಸ್ ಪ್ರೆಸ್ ವೇನಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಸ್ಲೀಪರ್ ಬಸ್ ಡಿಕ್ಕಿ ಹೊಡೆದಿದ್ದು, ಭೀಕರ​ ಅಪಘಾತದಲ್ಲಿ 16 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಅಪಘಾತಕ್ಕಿಡಾದ ಬಸ್, ಲಾರಿ
ಅಪಘಾತಕ್ಕಿಡಾದ ಬಸ್, ಲಾರಿ
Updated on

ಲಖನೌ: ಫಿರೋಜಾಬಾದ್​ ಜಿಲ್ಲೆಯ ಲಖನೌ - ಆಗ್ರ ಎಕ್ಸ್ ಪ್ರೆಸ್ ವೇನಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಸ್ಲೀಪರ್ ಬಸ್ ಡಿಕ್ಕಿ ಹೊಡೆದಿದ್ದು, ಭೀಕರ​ ಅಪಘಾತದಲ್ಲಿ 16 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

55 ಪ್ರಯಾಣಿಕರಿದ್ದ ಈ ಬಸ್ ಬಿಹಾರದ ಮೋತಿಹರಿ ಜಿಲ್ಲೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 31 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೈಫೈ ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 8 ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಂಚರ್ ಆಗಿದ್ದ ಲಾರಿಯನ್ನು ಟಯರ್ ಬದಲಾಯಿಸುವುದಕ್ಕಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಅತಿ ವೇಗವಾಗಿ​ ಬಂದ ಖಾಸಗಿ ಬಸ್​ ಹಿಂದಿನಿಂದ ಲಾರಿಗೆ ಗುದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಫಘಾತ ವಿಷಯ ತಿಳಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ಸ್ಥಳಕ್ಕೆ ತೆರಳಲು ಸೂಚಿಸಿದ್ದು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com