ಸಿಎಎ ವಿರೋಧಿಸಿ ಪ್ರತಿಭಟನೆ: ಪೊಲೀಸ್-ಪ್ರತಿಭಟನಾಕಾರ ನಡುವೆ ಘರ್ಷಣೆ, 170 ಮಂದಿ ಬಂಧನ!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ನಡೆಸಿದ್ದು 170ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ
Updated on: 

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ನಡೆಸಿದ್ದು 170ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಚೆನ್ನೈನ 5 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸುತ್ತಿದ್ದು ಮಿಂಟ್ ಸೇತುವೆ ಪ್ರವೇಶದ್ವಾರವನ್ನು ಮುಚ್ಚಿದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರನ್ನು ಚದುರಿಸಿದ್ದು ಹಲವರನ್ನು ಬಂಧಿಸಿದ್ದಾರೆ.

ಪ್ರತಿಭಟನಾಕಾರನ್ನು ಚದುರಿಸಲು ಈ ಪೊಲೀಸರು ಲಾಠಿ ಚಾರ್ಚ್ ಮಾಡಬೇಕಾಯಿತು. ಈ ವೇಳೆ ಹಲವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com