ಕುರುಕ್ಷೇತ್ರ: ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ಅನಿಲ ಸೋರಿಕೆ, 15 ಮಂದಿ ಆಸ್ಪತ್ರೆಗೆ ದಾಖಲು

ಕುರುಕ್ಷೇತ್ರದ ಶಹ್ಬಾದ್ ಮರ್ಕಾಂಡದಲ್ಲಿರುವ ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಪರಿಣಾಮ 15 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕುರುಕ್ಷೇತ್ರ: ಕುರುಕ್ಷೇತ್ರದ ಶಹ್ಬಾದ್ ಮರ್ಕಾಂಡದಲ್ಲಿರುವ ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಪರಿಣಾಮ 15 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. 

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಸಿಬ್ಬಂದಿಗಳು ಊಟಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿದೆ ಎಂದು ವರದಿಗಲು ತಿಳಿಸಿವೆ. 

ಸ್ಥಾವರವಿರುವ ಕೆಲವೇ ದೂರದಲ್ಲಿ 40 ಕುಟುಂಬಗಳು ವಾಸವಿದ್ದು, ಅನಿಲ ಸೋರಿಕೆ ಪರಿಣಾಮ ಜನರಲ್ಲಿ ಉಸಿರಾಟ ಸಮಸ್ಯೆಯುಂಟಾಗಿದೆ. ಅಲ್ಲದೆ, ಕೆಲವರಲ್ಲಿ ವಾಂತಿ ಶುರುವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಜನರನ್ನು ದಾಖಲು ಮಾಡಲಾಗಿದೆ. 

15 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಎಲ್ಲರೂ ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಗಳು ತಿಳಿಸಿವೆ. ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಬಂದಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com