ಕದನ ವಿರಾಮ ಉಲ್ಲಂಘಿಸಿದ ಪಾಕ್'ಗೆ ದಿಟ್ಟ ಉತ್ತರ: ಓರ್ವ ಯೋಧನನ್ನು ಸದೆಬಡಿದ ಭಾರತೀಯ ಸೇನೆ

ಗಡಿಯಲ್ಲಿ ಉದ್ಧಟತನ ಪ್ರದರ್ಶಿಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು,  ಓರ್ವ ಪಾಕಿಸ್ತಾನ ಯೋಧನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಗಡಿಯಲ್ಲಿ ಉದ್ಧಟತನ ಪ್ರದರ್ಶಿಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು,  ಓರ್ವ ಪಾಕಿಸ್ತಾನ ಯೋಧನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿತ್ತು. ಈ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದ್ದು, ಓರ್ವ ಪಾಕಿಸ್ತಾನ ಯೋಧನನ್ನು ಹತ್ಯೆ ಮಾಡಿದೆ. ಅಲ್ಲದೆ, ಸೇನೆಯ ದಾಳಿಗೆ ಹಲವು ಪಾಕಿಸ್ತಾನ ಯೋಧರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಕಳೆದ ಹಲವು ವಾರಗಳಿಂದಲೂ ಗಡಿಯಲ್ಲಿ ಪಾಕಿಸ್ತಾನ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನೀಲಂ ಪ್ರದೇಶದ ಗಡಿ ನಿಯಂತ್ರಣ ಮೂಲಕ ಉಗ್ರರನ್ನು ಭಾರತದೊಳಗೆ ನುಗ್ಗಿಸಲು ಯತ್ನಿಸುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com