ಅಮೆರಿಕಾ ಅಧ್ಯಕ್ಷರನ್ನು ಸ್ವಾಗತಿಸಲು ಭಾರತ ಎದುರು ನೋಡುತ್ತಿದೆ- ಪ್ರಧಾನಿ ಮೋದಿ 

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಭಾರತ ಎದುರು ನೋಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ಅಮೆರಿಕಾ ಅಧ್ಯಕ್ಷರು ಭಾರತ ಭೇಟಿ ಕೈಗೊಂಡಿದ್ದಾರೆ.
ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್
ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್
Updated on: 

ನವದೆಹಲಿ: ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಭಾರತ ಎದುರು ನೋಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ಅಮೆರಿಕಾ ಅಧ್ಯಕ್ಷರು ಭಾರತ ಭೇಟಿ ಕೈಗೊಂಡಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಭಾರತ ಎದುರು ನೋಡುತ್ತಿದೆ. ನಾಳೆ ಅಹಮದಾಬಾದಿನ ಐತಿಹಾಸಿಕ ಕಾರ್ಯಕ್ರಮದ ಮೂಲಕ ಅವರು ನಮ್ಮೊಂದಿಗೆ ಇರುವುದು ಗೌರವವನ್ನುಂಟುಮಾಡಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ನರೇಂದ್ರ ಮೋದಿ, ಇಡೀ ಗುಜರಾತ್ ಒಂದೇ ಧ್ವನಿಯಲ್ಲಿ ನಮಸ್ತೆ ಟ್ರಂಪ್ ಬಗ್ಗೆ ಮಾತನಾಡುತ್ತಿದೆ ಎಂದಿದ್ದಾರೆ

ಡೊನಾಲ್ಡ್ ಟ್ರಂಪ್ ಭೇಟಿ ಹಿನ್ನೆಲೆಯಲ್ಲಿ ಇಂದು ಅಹಮದಾಬಾದಿಗೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು. 

ಮೊಟೆರಾ ಕ್ರೀಡಾಂಗಣದಲ್ಲಿ ಬೃಹತ್ ಜನಸ್ತೋಮವನ್ನುದ್ದೇಶಿಸಿ ಟ್ರಂಪ್ ಮಾತನಾಡಲಿದ್ದಾರೆ. ನಂತರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. 

ಅಹಮದಾಬಾದ್, ಆಗ್ರಾ ಮತ್ತು ನವದೆಹಲಿಯಲ್ಲಿ ಎಲ್ಲೆಲ್ಲೂ ಟ್ರಂಪ್ ಸ್ವಾಗತಿಸುವ ಹೋರ್ಡಿಂಗ್ ಗಳು ರಾರಾಜಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com