ರಾಷ್ಟ್ರಪತಿ ಭವನದಲ್ಲಿ ಟ್ರಂಪ್ ದಂಪತಿಗೆ ಸಾಂಪ್ರದಾಯಿಕ ಅದ್ಧೂರಿ ಸ್ವಾಗತ

ರಾಷ್ಟ್ರಪತಿ ಭವನದಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಇಂದು ಸಾಂಪ್ರದಾಯಿಕ ಅದ್ಧೂರಿ ಸ್ವಾಗತ ನೀಡಲಾಯಿತು.
ರಾಷ್ಟ್ರಪತಿ ಭವನದ ಬಳಿ ಡೊನಾಲ್ಡ್ ಟ್ರಂಪ್ ದಂಪತಿ, ಪ್ರಧಾನಿ ಮೋದಿ
ರಾಷ್ಟ್ರಪತಿ ಭವನದ ಬಳಿ ಡೊನಾಲ್ಡ್ ಟ್ರಂಪ್ ದಂಪತಿ, ಪ್ರಧಾನಿ ಮೋದಿ
Updated on: 

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಇಂದು ಸಾಂಪ್ರದಾಯಿಕ ಅದ್ಧೂರಿ ಸ್ವಾಗತ ನೀಡಲಾಯಿತು.

ಪ್ರಸಿದ್ಧ ದಿ ಬಿಯಾಸ್ ಕಾರಿನಲ್ಲಿ ಪತ್ನಿ ಮೆಲಾನಿಯಾ ಅವರೊಂದಿಗೆ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಟ್ರಂಪ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಅವರ ಪತ್ನಿ ಸವಿತಾ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಸ್ವಾಗತ ನೀಡಿದರು.

ರಾಷ್ಟ್ರಪತಿ ಭವನದ ಮುಂಭಾಗದ ಆವರಣದಲ್ಲಿ ಭೂ, ವಾಯು ಹಾಗೂ ನೌಕ ಸೇನಾ ಸಿಬ್ಬಂದಿಯಿಂದ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಡೊನಾಲ್ಡ್ ಟ್ರಂಪ್  ವಿವಿಧ ಸೇನಾ ತುಕಡಿಗಳ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಆರೋಗ್ಯ ಸಚಿವ ಹರ್ಷವರ್ಧನ್, ಹಾಗೂ ಸೇನಾ ವಿಭಾಗದ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 ನಂತರ ಟ್ರಂಪ್ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿ ಇರುವ ಸ್ಥಳ ರಾಜ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com