ದೇಶ

ಮಹಾ ವಿಧಾನಸಭೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಮರಾಠಿ ಕಡ್ಡಾಯ ಮಸೂದೆ ಅಂಗೀಕಾರ 

ಮಹಾ ವಿಧಾನಸಭೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಮರಾಠಿ ಕಡ್ಡಾಯ ಮಸೂದೆ ಅಂಗೀಕಾರ 
ಸಾಂದರ್ಭಿಕ ಚಿತ್ರ
Published On :

ಮುಂಬೈ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮರಾಠಿ ಕಡ್ಡಾಯಗೊಳಿಸುವ ಮಸೂದೆಯನ್ನು ಗುರುವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅವಿರೋಧವಾಗಿ ಅಂಗೀಕರಿಸಲಾಗಿದೆ.

ಇಂದು ಮರಾಠಿ ಭಾಷಾ ದಿನ ಆಚರಿಸುತ್ತಿರುವ ಸಂದರ್ಭದಲ್ಲೇ ಮಹಾರಾಷ್ಟ್ರ ಸರ್ಕಾರ ಮರಾಠಿಗರಿಗೆ ಭರ್ಜರಿ ಗಿಫ್ಟ್ ನೀಡಿದೆ.

ನಿನ್ನೆಯಷ್ಟೇ ಶಾಲೆಗಳಲ್ಲಿ ಮರಾಠಿ ಕಡ್ಡಾಯ ಬೋಧನೆ ಮತ್ತು ಮರಾಠಿ ಭಾಷೆಯ ಕಲಿಕೆ ಮಸೂದೆ 2020 ಅನ್ನು ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಗಿತ್ತು. ಇಂದು ವಿಧಾನಸಭೆಯಲ್ಲಿ ಮಸೂದೆಅಂಗೀಕರಿಸಲಾಗಿದೆ.

ಮರಾಠಿ ಭಾಷಾ ಸಚಿವ ಸುಭಾಶ್ ದೇಸಾಯಿ ಅವರು ಇಂದು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕ ಮಾದರಿಯಲ್ಲಿ ರಾಜ್ಯದಲ್ಲೂ ಮರಾಠಿಯನ್ನು ಕಡ್ಡಾಗೊಳಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಇನ್ನು ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಮರಾಠಿ ವಿಷಯ ಕಡ್ಡಾಯವಾಗಲಿದೆ ಎಂದು ದೇಸಾಯಿ ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.