ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ: ಸ್ಫೋಟಕ್ಕೆ ಕುಸಿದ ಕಟ್ಟಡ, ಸಿಕ್ಕಿ ಹಾಕಿಕೊಂಡ ಹಲವರು
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ದೆಹಲಿಯ ಪಶ್ಚಿಮ ಭಾಗದಲ್ಲಿರುವ ಪೀರಾ ಗರ್ಹಿಯ ಉಡೊಹ್ ನಗರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಸ್ಫೋಟವುಂಟಾಗಿ ಹತ್ತಿ ಉರಿದು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಹಲವರು ಸಿಲುಕಿ ಹಾಕಿಕೊಂಡಿದ್ದಾರೆ.
ಕಾರ್ಖಾನೆಯಲ್ಲಿನ ಬೆಂಕಿಯನ್ನು ನಂದಿಸಿ ಪರಿಸ್ಥಿತಿ ನಿಯಂತ್ರಿಸಲು 35 ಅಗ್ನಿಶಾಮಕ ಎಂಜಿನ್ ಗಳು ಸ್ಥಳಕ್ಕೆ ಆಗಮಿಸಿವೆ. ಕಟ್ಟಡದಲ್ಲಿ ಸಿಲುಕಿ ಹಾಕಿಕೊಂಡಿರುವ ಜನರನ್ನು ಕಾಪಾಡಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಫ್ಯಾಕ್ಟರಿಯಲ್ಲಿ ಇಂದು ನಸುಕಿನ ಜಾವ 4.23ಕ್ಕೆ ಸ್ಫೋಟವುಂಟಾಗಿ ಬೆಂಕಿ ಹತ್ತಿ ಉರಿಯಲಾರಂಭಿಸಿತು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಹೋಯಿತು. ಅವರು ಬಂದು ಬೆಂಕಿ ನಂದಿಸುವಷ್ಟರಲ್ಲಿ ಕಟ್ಟಡ ಕುಸಿಯಲಾರಂಭಿಸಿತು. ಆಗ ಕಟ್ಟಡದೊಳಗಿದ್ದ ಜನರು ಸಿಲುಕಿಕೊಂಡರು. ಅವರ ಜೊತೆ ಕೆಲ ಅಗ್ನಿಶಾಮಕ ಸಿಬ್ಬಂದಿ ಕೂಡ ಸಿಲುಕಿಹಾಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಹಿರಿಯ ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ