ಪೌರತ್ವ ಕಾಯ್ದೆ ವಿರುದ್ಧ ಅಪಪ್ರಚಾರ: ಪಕ್ಷ ತೊರೆದ ಗೋವಾ ಕಾಂಗ್ರೆಸಿಗರು!

ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ವಿರುದ್ಧ ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಗೋವಾ ಕಾಂಗ್ರೆಸ್ ನ ನಾಲ್ವರು ಮುಖಂಡರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಕಾಂಗ್ರೆಸ್
ಕಾಂಗ್ರೆಸ್

ಪಣಜಿ: ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ವಿರುದ್ಧ ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಗೋವಾ ಕಾಂಗ್ರೆಸ್ ನ ನಾಲ್ವರು ಮುಖಂಡರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. 

ಕಾಯ್ದೆ ಕುರಿತಂತೆ ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಸಿದೆ ಎಂದು  ಪಣಜಿ ಕಾಂಗ್ರೆಸ್ ಬ್ಲಾಕ್ ಸಮಿತಿಯ ಅಧ್ಯಕ್ಷ ಪ್ರಸಾದ್ ಅಮೋಂಕರ್, ಉತ್ತರ ಗೋವಾ ಅಲ್ಪಸಂಖ್ಯಾತರ ಸೆಲ್ ಮುಖ್ಯಸ್ಥ ಜಾವೇದ್ ಶೇಕ್, ಬ್ಲಾಕ್ ಸಮಿತಿ ಕಾರ್ಯದರ್ಶಿ ದಿನೇಶ್ ಕುಬಲ್ ಮತ್ತು ಮಾಜಿ ಯುವ ನಾಯಕ ಶಿವರಾಜ್ ತರ್ಕರ್ ಪಕ್ಷಕ್ಕೆ ರಾಜಿನಾಮೆ ನೀಡಿ ಕಾಯ್ದೆ ಪರ ದನಿ ಎತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಮೋಂಕರ್ ಅವರು ಹೊಸ ಪೌರತ್ವ ಕಾಯ್ದೆ ಬಗ್ಗೆ ಕಾಂಗ್ರೆಸ್ ಸಾರ್ವಜನಿಕರಲ್ಲಿ, ಮುಖ್ಯವಾಗಿ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. 

ಸಿಎಎ ಮತ್ತು ಎನ್ಆರ್ಸಿ ಬಗ್ಗೆ ಕಾಂಗ್ರೆಸ್ ಕೈಗೊಂಡ ತಪ್ಪು ನಿಲುವನ್ನು ನಾವು ವಿರೋಧಿಸುತ್ತೇವೆ. ಪ್ರತಿಪಕ್ಷವಾಗಿ ನಾವು ವಿಮರ್ಶಾತ್ಮಕವಾಗಿರಬೇಕು ಮತ್ತು ವಿರೋಧಿಸುವ ಉದ್ದೇಶದಿಂದ ಏನನ್ನಾದರೂ ವಿರೋಧಿಸಬೇಕಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸ್ವಾಗತಿಸಬೇಕಾಗಿದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com