ಪ.ಬಂಗಾಳದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ನಾಲ್ವರು ಸಾವು

ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಭಾರಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮತ್ತು ಅಧಿಕೃತ ಮೂಲಗಳು ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲ್ಕತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಭಾರಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮತ್ತು ಅಧಿಕೃತ ಮೂಲಗಳು ತಿಳಿಸಿವೆ.

ಮೃತರೆಲ್ಲರೂ ನಿಹಾತಿಯಲ್ಲಿ ದೆಬೋಕ್ ನಲ್ಲಿರುವ ಕಾರ್ಖಾನೆ ಕೆಲಸಗಾರರಾಗಿದ್ದು, ಕಾರ್ಖಾನೆಯಲ್ಲಿನ ಸರಣಿ ಸ್ಫೋಟಗಳಿಂದ ಕಟ್ಟಡ ನೆಲಸಮವಾಗಿದೆ.

ಇಂದು ಮಧ್ಯಾಹ್ನ 12ರ ಸುಮಾರಿಗೆ ಈ ದುರಂತ ನಡೆದಿದದು, ಘಟನೆಯಲ್ಲಿ 10 ಕಾರ್ಮಿಕರು ತೀವ್ರ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸ್ಫೋಟದ ಸದ್ದು 10ಕಿ.ಮೀ ದೂರದವರೆಗೆ ಕೇಳಿಸಿದೆ. ಕಾರ್ಖಾನೆಯ ಮಾಲೀಕ ನೂರ್ ಹುಸೇನ್ ಪರಾರಿಯಾಗಿದ್ದಾನೆ. ಪೊಲೀಸರು ನೂರ್‌ಗಾಗಿ ಜಾಲ ಬೀಸಿದ್ದಾರೆ.

ಕಳೆದ ವರ್ಷ ಕೂಡ ಇದೇ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಇಲ್ಲಿ ಕೆಲವು ಕಾರ್ಖಾನೆಗಳಲ್ಲಿ ಪಟಾಕಿ ಮಾತ್ರವಲ್ಲ, ಬೇರೆ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗುತ್ತಿದೆ ಎಂದು ಸ್ಥಳೀಯ ನಾಗರಿಕರು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com