ಉತ್ತರ ಪ್ರದೇಶದಲ್ಲಿ ಅತಿದೊಡ್ಡ ಡಿಫೆನ್ಸ್ ಎಕ್ಸ್‌ ಪೋ: ರಾಜನಾಥ್ ಸಿಂಗ್

ಉತ್ತರ ಪ್ರದೇಶದಲ್ಲಿ ಅತಿದೊಡ್ಡ ರಕ್ಷಣಾ ಪ್ರದರ್ಶನ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Updated on: 

ಲಖನೌ: ಉತ್ತರ ಪ್ರದೇಶದಲ್ಲಿ ಅತಿದೊಡ್ಡ ರಕ್ಷಣಾ ಪ್ರದರ್ಶನ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಫೆಬ್ರವರಿ 5 ರಂದು ಪ್ರಧಾನಿ ನರೇಂದ್ರ ಮೋದಿ ಈ ಅತಿದೊಡ್ಡ ರಕ್ಷಣಾ ಎಕ್ಸ್‌ ಪೋ ಉದ್ಘಾಟಿಸಲಿದ್ದು, ಇದು ಉತ್ತರ ಪ್ರದೇಶವನ್ನು ರಕ್ಷಣಾ ವಲಯ ಮತ್ತು ವೈಮಾನಿಕ ತಯಾರಿಕಾ ಕೇಂದ್ರದ ಪ್ರಮುಖ ತಾಣವನ್ನಾಗಿ ಮಾಡಲು ನೆರವಾಗಲಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ಇಂದು ಲಖನೌನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಅವರು, ಫೆಬ್ರವರಿ 5 ರಿಂದ 9 ರವರೆಗೆ ಲಖನೌದಲ್ಲಿ ನಡೆಯಲಿರುವ ಅತಿದೊಡ್ಡ ರಕ್ಷಣಾ ಪ್ರದರ್ಶನಕ್ಕೆ ಫೆಬ್ರವರಿ 5 ರಂದು ಪ್ರಧಾನಿ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸುಮಾರು 200 ಎಕರೆ ಪ್ರದೇಶದಲ್ಲಿ ನಡೆಯುವ ಈ ಡಿಫೆನ್ಸ್ ಎಕ್ಸ್ ಪೋದಲ್ಲಿ ಭಾಗವಹಿಸುವುದಕ್ಕಾಗಿ ಅಮೆರಿಕ, ರಷ್ಯಾ, ಬ್ರಿಟನ್ ಹಾಗೂ ಫ್ರಾನ್ಸ್ ಸೇರಿದಂತೆ ವಿವಿಧ ದೇಶಗಳ 925 ಪ್ರದರ್ಶಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com