ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಅಸಮಾಧಾನ ಇಲ್ಲ: ಮಹಾ ಡಿಸಿಎಂ ಅಜಿತ್ ಪವಾರ್

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಶಿವಸೇನೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಅಸಮಾಧಾನ ಇಲ್ಲ ಎಂದು ಭಾನುವಾರ ಹೇಳಿದ್ದಾರೆ.
ಅಜಿತ್ ಪವಾರ್
ಅಜಿತ್ ಪವಾರ್
Updated on: 

ಮುಂಬೈ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಶಿವಸೇನೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಅಸಮಾಧಾನ ಇಲ್ಲ ಎಂದು ಭಾನುವಾರ ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳೆದ ಸೋಮವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದರು. ಬಳಿಕ ಮಹಾ ವಿಕಾಸ ಅಘಾಡಿ ಬಗ್ಗೆ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಅಜಿತ್ ಪವಾರ್ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಇಂದು ಉದ್ಧವ್ ಠಾಕ್ರೆ ಹಾಗೂ ಇತರೆ ಪ್ರಮುಖ ನಾಯಕರೊಂದಿಗೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಸಂಪುಟ ವಿಸ್ತರಣೆ ಬಗ್ಗೆ ಅಥವಾ ಖಾತೆ ಹಂಚಿಕೆ ಬಗ್ಗೆಯೂ ಯಾವುದೇ ನಾಯಕರಿಗೆ ಅಸಮಾಧಾನ ಇಲ್ಲ ಎಂದರು.

ಇಂದಿನ ಸಭೆಯಲ್ಲಿ ಯಾವ ಸಚಿವರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದರ ಬಗ್ಗೆ ಚರ್ಚಿಸಿದ್ದೇವೆ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com