ಕಾಂಗ್ರೆಸ್, ಕಮ್ಯುನಿಸ್ಟ್, ಆಪ್ ವಿವಿಗಳಲ್ಲಿ ಹಿಂಸಾಚಾರ ವಾತಾವರಣ ಬಯಸುತ್ತಿದ್ದಾರೆ: ಜವಡೇಕರ್

ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಮ್ ಆದ್ಮಿ ಪಕ್ಷಗಳು ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾಚಾರ ವಾತಾವರಣವನ್ನು ಬಯಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಹೇಳಿದ್ದಾರೆ. 
ಜವಡೇಕರ್
ಜವಡೇಕರ್
Updated on

ನವದೆಹಲಿ: ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಮ್ ಆದ್ಮಿ ಪಕ್ಷಗಳು ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾಚಾರ ವಾತಾವರಣವನ್ನು ಬಯಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಸೋಮವಾರ ಹೇಳಿದ್ದಾರೆ. 

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಹಿನ್ನೆಲೆಯಲ್ಲಿ ಪ್ರತಿಕ್ರಿಯ ನೀಡಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಅಹಿತಕರ ವಾತಾವರಣ ನಿರ್ಮಾಣ ಮಾಡುವ ಯತ್ನಗಳು ನಡೆಯುತ್ತಿವೆ. ಕೆಲವರು ಪಿತೂರಿಗಳನ್ನು ನಡೆಸುತ್ತಿದ್ದು, ಅಂತಹ ಪಿತೂರಿಗಳು ಬಹಿರಂಗಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 

ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸುತ್ತೇವ. ಕಾಂಗ್ರೆಸ್, ಕಮ್ಯುನಿಸ್ಟ್ ಗಳು, ಆಪ್ ಹಾಗೂ ಇತರೆ ಶಕ್ತಿಗಳು ದೇಶದ ವಿಶ್ವವಿದ್ಯಾಲಯಗಳಲ್ಲಿ ಹಿಂಸಾತ್ಮಕ ವಾತಾವರಣಗಳನ್ನು ಬಯುಸುತ್ತಿವೆ. ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com