ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿನ ಅವಂತಿಪೊರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಅವಂತಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಕಾರ್ಯಾಚರಣೆ ಆರಂಭಿಸಿದ್ದ ಸೇನಾಪಡೆ, ಇದೀಗ ಎನ್'ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
ಪ್ರಸ್ತುತ ಹತ್ಯೆಯಾದ ಉಗ್ರನಿಂದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಸೇನಾಪಡೆ, ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ವರದಿಗಳು ತಿಳಿಸಿವೆ.
Advertisement