ಟ್ರಂಪ್ ಮೋದಿ ದೂರವಾಣಿಯಲ್ಲಿ ಮಾತುಕತೆ; ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿ ಭರವಸೆ

ವಿಶ್ವಾಸ, ಪರಸ್ಪರ ಗೌರವ ಮತ್ತು ಅರ್ಥೈಸುವಿಕೆಯ ಮೇಲೆ ಭಾರತ – ಅಮೆರಿಕ ಸಂಬಂಧಗಳು ನಿಂತು ಬೆಳೆಯುತ್ತಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್

ನವದೆಹಲಿ: ವಿಶ್ವಾಸ, ಪರಸ್ಪರ ಗೌರವ ಮತ್ತು ಅರ್ಥೈಸುವಿಕೆಯ ಮೇಲೆ ಭಾರತ – ಅಮೆರಿಕ ಸಂಬಂಧಗಳು ನಿಂತು ಬೆಳೆಯುತ್ತಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.


ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಮೂಲಕ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ ಮೋದಿ, ಪರಸ್ಪರ ಹಿತಾಸಕ್ತಿಯ ಎಲ್ಲಾ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಪ್ರಕ್ರಿಯೆಯನ್ನು ಮುಂದುವರೆಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.


ದೂರವಾಣಿಯಲ್ಲಿ ಪರಸ್ಪರ ಮಾತುಕತೆ ವೇಳೆ ಪ್ರಧಾನಿ ಮೋದಿ ಕಳೆದ ವರ್ಷ ಎರಡೂ ದೇಶಗಳು ಕಾರ್ಯಾತ್ಮಕ ಸಹಭಾಗಿತ್ವದಲ್ಲಿ ಇನ್ನಷ್ಟು ಮಹತ್ವದ ಪ್ರಗತಿ ತೋರಿಸಿದ್ದನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಸಹ ದ್ವಿಪಕ್ಷೀಯ ಸಂಬಂಧದಲ್ಲಿ ಆದ ಸುಧಾರಣೆ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಮುಂದಿನ ವರ್ಷಗಳಲ್ಲಿ ಅದನ್ನು ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆ ಒಲವು ತೋರಿಸಿದರು. 


ನಂತರ ಉಭಯ ನಾಯಕರು ಹೊಸ ವರ್ಷದ ಶುಭ ಕಾಮನೆಗಳನ್ನು ಹಂಚಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com