ಹಿಂದೂ ಮುಖಂಡನ ಹತ್ಯೆ, ಉಗ್ರ ದಾಳಿಗೆ ಸಂಚು, 3 ಶಂಕಿತ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು!

ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಉಗ್ರ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಪೊಲೀಸರು
ದೆಹಲಿ ಪೊಲೀಸರು
Updated on: 

ನವದೆಹಲಿ: ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಉಗ್ರ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 

ದೆಹಲಿ ಪೊಲೀಸರು ಬಹು ದೊಡ್ಡ ಕಾರ್ಯಚರಣೆ ನಡೆಸಿದ್ದು ಖ್ವಾಜಾ ಮೋಹಿನ್ನುದ್ದೀನ್, ಸೈಯದ್ ನವಾಜ್ ಮತ್ತು ಅಬ್ದುಲ್ ಸಮದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೂವರ ಪೈಕಿ ಇಬ್ಬರು ಹಿಂದೂ ಮುಖಂಡ ಸುರೇಶ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. 

ಓರ್ವ ವಿದೇಶಿ ಹ್ಯಾಂಡ್ಲರ್ ಸಾಮಾಜಿಕ ಜಾಲತಾಣದ ಮೂಲಕ ಇವರನ್ನು ಸಂಪರ್ಕಿಸುತ್ತಿದ್ದ. ಇನ್ನು ಉತ್ತರ ಪ್ರದೇಶ ಮತ್ತು ದೆಹಲಿಯ ಎನ್ ಸಿಆರ್ ನಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com