ಮಹಾರಾಷ್ಟ್ರ: ರಾಸಾಯನಿಕ ಘಟಕದಲ್ಲಿ ಸ್ಫೋಟ, 6 ಮಂದಿ ದುರ್ಮರಣ

ನೈಟ್ರೇಟ್ ರಾಸಾಯನಿಕ ಉತ್ಪಾದನ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.
ಸ್ಫೋಟ
ಸ್ಫೋಟ
Updated on: 

ಮುಂಬೈ: ನೈಟ್ರೇಟ್ ರಾಸಾಯನಿಕ ಉತ್ಪಾದನ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. 

ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ 100 ಕಿ.ಮೀ ದೂರದಲ್ಲಿರುವ ಪಾಲ್ಗಾರ್ ಜಿಲ್ಲೆಯ ತಾರಾಪುರದಲ್ಲಿರುವ ತಾರಾ ಘಟಕದಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಘಟಕದಲ್ಲಿ ಇನ್ನು ಹಲವು ಸಿಲುಕಿಕೊಂಡಿದ್ದು ಅವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com