ಬಿಹಾರ: ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯಿಂದ ಪತ್ನಿ, ತಾಯಿ, ಮೂವರು ಹೆಣ್ಣುಮಕ್ಕಳ ಬರ್ಬರ ಹತ್ಯೆ

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ತಾಯಿ, ಪತ್ನಿ ಹಾಗೂ ಮೂವರು ಅಪ್ರಾಪ್ತ ಹೆಣ್ಣಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮುಂಗೇರ್: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ತಾಯಿ, ಪತ್ನಿ ಹಾಗೂ ಮೂವರು ಅಪ್ರಾಪ್ತ ಹೆಣ್ಣಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.

ಭರತ್ ಕುಮಾರ್ ಕೇಸರಿ ಎಂಬ ವ್ಯಕ್ತಿ ತನ್ನ ಪತ್ನಿ, ತಾಯಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ತಾನೂ ಕೆಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹವೇಲಿ ಖರಗಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡಿರುವ ಕೇಸರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇಸರಿ ಅವರು ತನ್ನ ಅಂಗಡಿಗೆ ಸಂಬಂಧಿಸಿದ ಕೆಲವು ಮಹತ್ವದ ದಾಖಲೆಗಳು ಕಳೆದುಕೊಂಡ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಇಂದು ಬೆಳಗಿನ ಜಾವ ನಿದ್ದೆ ಮಾಡುತ್ತಿದ್ದ ತನ್ನ ತಾಯಿ ಸಾವಿತ್ರಿ ದೇವಿ(90), ಪತ್ನಿ ಆಶಾ ದೇವಿ(40), ಮಕ್ಕಳಾದ ಶಿವಾನಿ(16), ಸಿಮ್ರಾನ್(14) ಹಾಗೂ ಸೋನಂ(11) ಅವರನ್ನು ಹತ್ಯೆ ಮಾಡಿದ್ದಾರೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಸರಿ ಮನೆಯ ಮೇಲಿಂದ ಜಿಗಿದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಖರಗಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com