ಸಂಸತ್ ಅಂಗೀಕರಿಸಿದ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ನಿರಾಕರಿಸುವಂತಿಲ್ಲ: ಹರ್ಯಾಣ ಮಾಜಿ ಸಿಎಂ ಹೂಡಾ

ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ತಿರಸ್ಕರಿಸುವಂತಿಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ಹರ್ಯಾಣ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ತಿರಸ್ಕರಿಸುವಂತಿಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ಹರ್ಯಾಣ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ.

ನಿನ್ನೆಯಷ್ಟೇ ಇದೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅವರೂ ಕೂಡ ಇದೇ  ರೀತಿಯ ಹೇಳಿಕೆ ನೀಡಿ ಕಾಂಗ್ರೆಸ್ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು. 'ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)  ಯನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯವು ಯಾವ ಕಾರಣಕ್ಕೂ ನಿರಾಕರಿಸಬಾರದು. ಹಾಗೆಯೇ ಮಾಡುವುದು "ಅಸಂವಿಧಾನಿಕ" ಎಂದು ಅಭಿಪ್ರಾಯಪಟ್ಟಿದ್ದರು.

ಇದೀಗ ಕಪಿಲ್ ಸಿಬಲ್ ಅವರ ವಾದಕ್ಕೆ ಹರ್ಯಾಣ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡ ಕೂಡ ಬೆಂಬಲ ನೀಡಿದ್ದು, ಸಂಸತ್ ನಲ್ಲಿ ಅಂಗೀಕಾರ ಪಡೆದ ಒಂದು ಕಾಯ್ದೆಯನ್ನು ಯಾವುದೇ ರಾಜ್ಯ ಸರ್ಕಾರಗಳು ನಿರಾಕರಿಸುವಂತಿಲ್ಲ. ಆದರೆ ಇದನ್ನು ಕಾನೂನಾತ್ಮಕವಾಗಿ ಪರಿಶೀಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರದ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮಧ್ಯಪ್ರದೇಶ ಮತ್ತು ಛತ್ತೀಸ್ ಘಡ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ವಿರೋಧ ವ್ಯಕ್ತಿಸಿದ್ದು ಮಾತ್ರವಲ್ಲದೇ ಕಾಯ್ದೆ ಜಾರಿ ಮಾಡುವುದಿಲ್ಲ ಎಂದು ಸವಾಲೆಸೆದಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com