ಶೋಪಿಯಾನ್: ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ

ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಶೋಪಿಯಾನ್ ನಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಶೋಪಿಯಾನ್ ನಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. 

ಭಯೋತ್ಪಾದಕರು ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ ಜಮ್ಮು-ಕಾಶ್ಮೀರದ ವಿಶೇಷ ಕಾರ್ಯಾಚರಣೆ ತಂಡ, ಸೇನೆ ಮತ್ತು ಸಿಆರ್ ಪಿಎಫ್ ಪಡೆಗಳು ಜಂಟಿಯಾಗಿ ಶೋಪಿಯಾನ್ ಜಿಲ್ಲೆಯ ವಾಚಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದವು. 

ನಿರ್ದಿಷ್ಟ ಪ್ರದೇಶವೊಂದರತ್ತು ಭದ್ರತಾ ಪಡೆಗಳು ಸಾಗುತ್ತಿದ್ದಾಗ, ಅಡಗಿ ಕುಳಿತಿದ್ದ ಭಯೋತ್ಪಾದಕರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಸಹ ಗುಂಡಿನ ದಾಳಿ ನಡೆಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ. 

‘ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.’ ಎಂದು ಅವರು ಹೇಳಿದ್ದಾರೆ.ಇತ್ತೀಚಿನ ವರದಿ ಬಂದಾಗ ಕಾರ್ಯಾಚರಣೆ ಮುಂದುವರೆದಿದೆ. 

ಇತರ ಭಯೋತ್ಪಾದಕರು ತಪ್ಪಿಸಿಕೊಂಡು ಓಡಿಹೋಗುವುದನ್ನು ತಡೆಯಲು ಕಾರ್ಯಾಚರಣೆ ಮತ್ತಷ್ಟು ತೀವ್ರಗೊಳಿಸಲು ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com