ನಿರ್ಭಯಾ ಅತ್ಯಾಚಾರಿಗಳು
ನಿರ್ಭಯಾ ಅತ್ಯಾಚಾರಿಗಳು

ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನೇ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮುಕೇಶ್ ಸಿಂಗ್

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಹಲವು ತಂತ್ರಗಳನ್ನು ಬಳಸುತ್ತಿದ್ದು, ಇದೀಗ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ.

ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಹಲವು ತಂತ್ರಗಳನ್ನು ಬಳಸುತ್ತಿದ್ದು, ಇದೀಗ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ.

ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಿಂಗ್ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನವರಿ 17 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದರು. ಈಗ ಮುಕೇಶ್ ಸಿಂಗ್ ಪರ ವಕೀಲೆ ವೃಂದಾ ಗ್ರೋವರ್ ಅವರು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನೇ ಪ್ರಶ್ನಿಸಿ, ನ್ಯಾಯಾಂಗ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ.

ಶತ್ರುಘ್ನ ಚೌಹಾನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ವಿಧಾನವನ್ನು ನ್ಯಾಯಾಂಗ ಪರಿಶೀಲನೆಗಾಗಿ ಆರ್ಟಿಕಲ್ 32 ರ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲಾಗಿದೆ" ಎಂದು ಮುಕೇಶ್ ಸಿಂಗ್ ಪರ ವಕೀಲೆ ವೃಂದಾ ಗ್ರೋವರ್ ಪಿಟಿಐಗೆ ತಿಳಿಸಿದ್ದಾರೆ.

ಅಪರಾಧಿಗಳಾದ ಮುಕೇಶ್ ಸಿಂಗ್ ಮತ್ತು ವಿನಯ್ ಕುಮಾರ್ ಶರ್ಮಾ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಬಳಿಕ ಇಬ್ಬರೂ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಅದೂ ತಿರಸ್ಕೃತಗೊಂಡಿತ್ತು.

Related Stories

No stories found.

Advertisement

X
Kannada Prabha
www.kannadaprabha.com