ಕೊರೋನಾ ವೈರಸ್: ಭಾರತದಲ್ಲಿ ತೀವ್ರ ಕಟ್ಟೆಚ್ಚರ, ಚೀನಾದಿಂದ ಬಂದ ಪ್ರಯಾಣಿಕರ ಮೇಲೆ ನಿಗಾ

ಕೊರೋನಾ ವೈರಸ್ ಸೋಂಕು ಭಾರತಕ್ಕೂ ಕಾಲಿಡುವ ಭೀತಿ ಹಿನ್ನೆಲೆಯಲ್ಲಿ ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರು ಸೇರಿ ದೇಶದ ವಿವಿಧೆಡೆ ಚೀನಾದಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೊರೋನಾ ವೈರಸ್ ಸೋಂಕು ಭಾರತಕ್ಕೂ ಕಾಲಿಡುವ ಭೀತಿ ಹಿನ್ನೆಲೆಯಲ್ಲಿ ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರು ಸೇರಿ ದೇಶದ ವಿವಿಧೆಡೆ ಚೀನಾದಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 

ಚೀನಾದಿಂದ ಭಾರತಕ್ಕೆ ಬಂದಿರುವ ಮೂವರನ್ನು ಆರ್'ಎಂಎಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವಿಶೇಷ ಕೊಠಡಿಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. 

ಪ್ರಸ್ತುತ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ಪುರುಷರು 24-28 ವರ್ಷ ಅಂತರದೊಳದವರಾಗಿದ್ದಾರೆಂದು ಹೇಳಲಾಗುತ್ತಿದ್ದು, ಮೂವರ ರಕ್ತ ಮಾದರಿಯನ್ನು ಪರೀಕ್ಷಿಸಲು ಪುಣೆ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆಂದು ಹೇಳಲಾಗುತ್ತಿದೆ. 

ಮೂವರ ಪೈಕಿ ಇಬ್ಬರು ದೆಹಲಿ ಮೂಲದವರಾಗಿದ್ದು, ಒರ್ವ ವ್ಯಕ್ತಿ ಎನ್'ಸಿಆರ್ ನಿವಾಸಿಯಾಗಿದ್ದಾರೆಂದು ತಿಳಿದುಬಂದಿದೆ. 

ಮೂವರಲ್ಲೂ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿದ್ದು, ಶೀತ, ಕೆಮ್ಮು ಹಾಗೂ ಜ್ವರದಂತಹ ಕೊರೋನಾ ವೈರಸ್ ನಿಂದ ಬರುವ ಲಕ್ಷಣಗಳು ಕಂಡು ಬಂದಿದೆ ಎಂದು ವರದಿಗಳು ತಿಳಿಸಿವೆ. 

ದೆಹಲಿಯಷ್ಟೇ ಅಲ್ಲದೆ, ಬಿಹಾರ, ಮುಂಬೈನಲ್ಲಿ ತಲಾ ಒಬ್ಬರು ಮತ್ತು ಹೈದರಾಬಾದ್ ನಲ್ಲಿ ಹೊಸದಾಗಿ ನಾಲ್ವರು ರೋಗಿಗಳಿಗೆ ಸೋಂಕು ತಗುಲಿರುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪ್ರತ್ಯೇಕ ಕೋಣೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೇರಳದಲ್ಲಿ ಇತ್ತೀಚೆಗೆ ಚೀನಾದಿದ ಮರಳಿದ 436 ಮಂದಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದ್ದು, ಸೋಂಕು ಪತ್ತೆಯಾಗಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com