ಪಕ್ಷದಿಂದ ಉಚ್ಚಾಟಿಸಿದ ಬಳಿಕ ನಿತಿಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಯುನಿಂದ ಉಚ್ಚಾಟನೆಗೊಂಡ ಕೆಲವೇ ಗಂಟೆಗಳಲ್ಲಿ ಪಕ್ಷದ ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಶಾಂತ್ ಕಿಶೋರ್ ಅವರು....
ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್
Updated on

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಯುನಿಂದ ಉಚ್ಚಾಟನೆಗೊಂಡ ಕೆಲವೇ ಗಂಟೆಗಳಲ್ಲಿ ಪಕ್ಷದ ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಶಾಂತ್ ಕಿಶೋರ್ ಅವರು, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಂಡಿದ್ದಕ್ಕೆ ಶುಭಾಶಯಗಳು ಎಂದು ವ್ಯಂಗ್ಯವಾಡಿದ್ದಾರೆ.

ತಮ್ಮನ್ನು ಪಕ್ಷದಿಂದ ಉಚ್ಚಾಟಿಸಿದ ಬಳಿಕ ಟ್ವೀಟ್ ಮಾಡಿದ ಪ್ರಶಾಂತ್ ಕಿಶೋರ್ ಅವರು, ಧನ್ಯವಾದಗಳು ನಿತಿಶ್ ಕುಮಾರ್ ಅವರೆ, ಬಿಹಾರ ಮುಖ್ಯಮಂತ್ರಿಯ ಕುರ್ಚಿ ಉಳಿಸಿಕೊಂಡಿದ್ದಕ್ಕೆ ನನ್ನಕಡೆಯಿಂದ ಶುಭಾಶಯಗಳು. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.

ಇಂದು ಮಧ್ಯಾಹ್ನ ಜೆಡಿಯು ನಾಯಕರಾದ ಪ್ರಶಾಂತ್ ಕಿಶೋರ್ ಮತ್ತು ಪವನ್ ವರ್ಮಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಈ ಇಬ್ಬರು ನಾಯಕರು ಜೆಡಿಯು ನಿಲುವಿಗೆ ವ್ಯತಿರಿಕ್ತವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್​ಆರ್​ಸಿಯನ್ನು ಬಲವಾಗಿ ವಿರೋಧಿಸಿದ್ದರು. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com