ಡಾ. ಕಫೀಲ್ ಖಾನ್
ದೇಶ
ಆಲಿಘರ್ ಮುಸ್ಲಿಂ ವಿವಿಯಲ್ಲಿ ಪ್ರಚೋದನಾಕಾರಿ ಹೇಳಿಕೆ: ಡಾ. ಕಫೀಲ್ ಖಾನ್ ಬಂಧನ
ಕಳೆದ ಡಿಸೆಂಬರ್ 12 ರಂದು ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ಆರೋಪದ ಮೇರೆಗೆ ಡಾ. ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮುಂಬೈಯಲ್ಲಿ ಬಂಧಿಸಿದೆ.
ಲಖನೌ: ಕಳೆದ ಡಿಸೆಂಬರ್ 12 ರಂದು ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ಆರೋಪದ ಮೇರೆಗೆ ಡಾ. ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮುಂಬೈಯಲ್ಲಿ ಬಂಧಿಸಿದೆ.
ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಡಾ. ಕಫೀಲ್ ಖಾನ್ ವಿರುದ್ಧ ಡಿಸೆಂಬರ್ 13 ರಂದು ಅಲಿಘರ್ ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ಆಲಿಘರ್ ವಿಶ್ವವಿದ್ಯಾಲಯದಲ್ಲಿ ಸುಮಾರು 600 ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಡಾ. ಕಫೀಲ್ ಖಾನ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಫ್ ಐಆರ್ ನಲ್ಲಿ ಆರೋಪಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ