ಸಂಗ್ರಹ ಚಿತ್ರ
ದೇಶ
ಸೊಪೋರ್'ನಲ್ಲಿ ಉಗ್ರರ ದಾಳಿ: ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮ, ಮತ್ತೋರ್ವ ನಾಗರೀಕ ಸಾವು, 2 ಯೋಧರ ಸ್ಥಿತಿ ಗಂಭೀರ
ಜಮ್ಮು ಮತ್ತು ಕಾಶ್ಮೀರದ ಸೊಪೋರ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮರಾಗಿದ್ದು, ಮತ್ತೋರ್ವ ನಾಗರೀಕ ಸಾವನ್ನಪ್ಪಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೊಪೋರ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮರಾಗಿದ್ದು, ಮತ್ತೋರ್ವ ನಾಗರೀಕ ಸಾವನ್ನಪ್ಪಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಸೊಪೋನಾ'ನ ಮಾಡೆಲ್ ಟೌನ್ ಬಳಿ ಇಂದು ಬೆಳಿಗ್ಗೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ನಾಗರೀಕ ಸೇರಿ ನಾಲ್ವರು ಸಿಆರ್'ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಇದೀಗ ನಾಗರೀಕ ಸಾವನ್ನಪ್ಪಿದ್ದು, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಅಲ್ಲದೆ, ಮತ್ತಿಬ್ಬರು ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.
ಈ ನಡುವೆ ಉಗ್ರರು ದಾಳಿ ನಡೆಸಿದ್ದ ಸ್ಥಳದ ಸುತ್ತಲೂ ಯೋಧರು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ