ಉತ್ತರ ಪ್ರದೇಶ: ಗುಡುಗು, ಮಿಂಚಿಗೆ 23 ಮಂದಿ ಬಲಿ, 29 ಮಂದಿಗೆ ಗಾಯ

ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಪ್ರಮಾಣದ ಸಿಡಿಲು, ಮಿಂಚು ಬಡಿದು ಕನಿಷ್ಠ 23 ಮಂದಿ ಮೃತಪಟ್ಟಿದ್ದು 29 ಮಂದಿ ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಲಕ್ನೊ: ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಪ್ರಮಾಣದ ಸಿಡಿಲು, ಮಿಂಚು ಬಡಿದು ಕನಿಷ್ಠ 23 ಮಂದಿ ಮೃತಪಟ್ಟಿದ್ದು 29 ಮಂದಿ ಗಾಯಗೊಂಡಿದ್ದಾರೆ.

ಅಲಹಾಬಾದ್ ಜಿಲ್ಲೆಯಲ್ಲಿ 8 ಮಂದಿ, 6 ಮಂದಿ ಮಿರ್ಜಾಪುರದಲ್ಲಿ, ಬಡೊಹಿ ಜಿಲ್ಲೆಯಲ್ಲಿ 6 ಮಂದಿ, ಕೌಶಂಬಿ ಜಿಲ್ಲೆಯಲ್ಲಿ ತಲಾ ಇಬ್ಬರು ಮತ್ತು ಒಬ್ಬರು ಜೌನ್ಪುರ್ ಜಿಲ್ಲೆಯಲ್ಲಿ ಗುಡುಗು, ಮಿಂಚಿನಿಂದ ಮೃತಪಟ್ಟಿದ್ದಾರೆ.

ಪ್ರಯಾಗ್ ರಾಜ್ ಜಿಲ್ಲೆಯಲ್ಲಿ 9 ಮಂದಿ, ಮಿರ್ಜಾಪುರದಲ್ಲಿ 10 ಮಂದಿ, ನಾಲ್ವರು ಕೌಶಂಬಿಯಲ್ಲಿ ಗುಡುಗು, ಮಿಂಚು ತಾಗಿ ತೀವ್ರ ಗಾಯಗೊಂಡಿದ್ದಾರೆ ಎಂದು ಪರಿಹಾರ ಆಯುಕ್ತರ ಕಚೇರಿ ತಿಳಿಸಿದೆ.

ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಆತಂಕ ವ್ಯಕ್ತಪಡಿಸಿದ್ದು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಗಾಯಗೊಂಡವರಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com