ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಜನರಿಂದ ಪ್ರತಿಭಟನೆ
ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಜನರಿಂದ ಪ್ರತಿಭಟನೆ

ನೀಲಂ ಜೆಲುಮ್ ನದಿಗೆ ಅಣೆಕಟ್ಟು ನಿರ್ಮಾಣ: ಪಾಕಿಸ್ತಾನ, ಚೀನಾ ಸರ್ಕಾರಗಳ ವಿರುದ್ಧ ಪಿಒಕೆ ನಿವಾಸಿಗಳಿಂದ ಪ್ರತಿಭಟನೆ

ಭಾರತದ ಗಡಿ ಮುಜಾಫರ್ ಬಾದ್ ನ ನೀಲಮ್ ಮತ್ತು ಜೆಲುಮ್ ನದಿಗಳ ಮೇಲೆ ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದ ನಿವಾಸಿಗಳು ಪಾಕಿಸ್ತಾನ ಮತ್ತು ಚೀನಾ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಜಾಫರ್ ಬಾದ್ (ಪಾಕ್ ಆಕ್ರಮಿತ ಕಾಶ್ಮೀರ) ಭಾರತದ ಗಡಿ ಮುಜಾಫರ್ ಬಾದ್ ನ ನೀಲಮ್ ಮತ್ತು ಜೆಲುಮ್ ನದಿಗಳ ಮೇಲೆ ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದ ನಿವಾಸಿಗಳು ಪಾಕಿಸ್ತಾನ ಮತ್ತು ಚೀನಾ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಚೀನಾ ಮತ್ತು ಪಾಕಿಸ್ತಾನ ಸರ್ಕಾರ ಅಣೆಕಟ್ಟು ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಈ ಬಗ್ಗೆ ನಮ್ಮ ಬಳಿ ಅಭಿಪ್ರಾಯವನ್ನು ತೆಗೆದುಕೊಂಡಿಲ್ಲ. ಅಣೆಕಟ್ಟನ್ನು ಅಕ್ರಮವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀಲಂ ಜೆಲುಮ್ ಮತ್ತು ಕೊಹಲಾ ಜಲ ವಿದ್ಯುತ್ ಯೋಜನೆಗಳನ್ನು ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಜನರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಣೆಕಟ್ಟು ನಿರ್ಮಾಣದಿಂದ ಪರಿಸರದ ಮೇಲೆ ಹಾನಿಯುಂಟಾಗುತ್ತದೆ ಎಂಬ ವಿರೋಧ ಇಲ್ಲಿನ ನಿವಾಸಿಗಳದ್ದು.

#SaveRiversSaveAJK ಎಂಬ ಹ್ಯಾಶ್ ಟಾಗ್ ನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಯುತ್ತಿದೆ.
ಪಾಕಿಸ್ತಾನ ಮತ್ತು ಚೀನಾ ಮಧ್ಯೆ ಯಾವ ಕಾನೂನಿನ ಆಧಾರದ ಮೇಲೆ ಅಣೆಕಟ್ಟು ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನದಿಗಳನ್ನು ಬಳಸಿಕೊಂಡು ಪಾಕ್ ಮತ್ತು ಚೀನಾ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಪ್ರತಿಭಟಾನಾಕಾರರು ಆರೋಪಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com