ಕೋವಿಡ್-19 ಲಸಿಕೆ ಗುಣಮಟ್ಟದಲ್ಲಿ ರಾಜಿ ಇಲ್ಲ- ಮುಖ್ಯ ವೈಜ್ಞಾನಿಕ ಸಲಹೆಗಾರ ಕೆ. ವಿಜಯ್ ರಾಘವನ್

ಕಠಿಣ ಮೌಲ್ಯಮಾಪನ ಪ್ರಕ್ರಿಯೆ ಮೂಲಕ ದೇಶದ ಕೋವಿಡ್-19 ಲಸಿಕೆಯ ಮಾನವ ಪ್ರಯೋಗ ನಡೆಯುತ್ತಿದ್ದು, ಲಸಿಕೆಯ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಕೇಂದ್ರ ಸರ್ಕಾರದ ಮುಖ್ಯ ವೈಜ್ಞಾನಿಕ ಸಲಹೆಗಾರ ಕೆ. ವಿಜಯ್ ರಾಘವನ್ ಶುಕ್ರವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕಠಿಣ ಮೌಲ್ಯಮಾಪನ ಪ್ರಕ್ರಿಯೆ ಮೂಲಕ ದೇಶದ ಕೋವಿಡ್-19 ಲಸಿಕೆಯ ಮಾನವ ಪ್ರಯೋಗ ನಡೆಯುತ್ತಿದ್ದು, ಲಸಿಕೆಯ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಕೇಂದ್ರ ಸರ್ಕಾರದ ಮುಖ್ಯ ವೈಜ್ಞಾನಿಕ ಸಲಹೆಗಾರ ಕೆ. ವಿಜಯ್ ರಾಘವನ್ ಶುಕ್ರವಾರ ಹೇಳಿದ್ದು, ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ-ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸುತ್ತಿರುವ ಲಸಿಕೆ ಆಗಸ್ಟ್ 15ರೊಳಗೆ ಹೊರಗೆ ಬರುವ ಸಾಧ್ಯತೆ ಇಲ್ಲ ಎಂಬುದನ್ನು ತಿಳಿಸಿದ್ದಾರೆ.

ಯಾವುದೇ ಲಸಿಕೆಯ ಮೊದಲ ಹಂತದ ಮಾನವ ಪ್ರಯೋಗ ಸಾಮಾನ್ಯವಾಗಿ 28 ದಿನಗಳನ್ನು ತೆಗೆದುಕೊಳ್ಳುತ್ತದೆ. ಇದು ಇನ್ನು ಎರಡು ಹಂತಗಳನ್ನು ದಾಟಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತ್ ಬಯೋಟೆಕ್ ಮತ್ತು ಜಿಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಲಸಿಕೆ ಮೇಲೆ ಮಾನವ ಪ್ರಯೋಗ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ  ಅನುಮೋದನೆ ನೀಡಿದ್ದು, ಈ ಎರಡು ಲಸಿಕೆಗಳ ಮೇಲೆ ಕಠಿಣ ಮೌಲ್ಯಮಾಪನ ಪ್ರಕ್ರಿಯೆ ನಡೆಸಲಾಗುವುದು, ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಐಸಿಎಂಆರ್ ಸ್ಪಷ್ಟಪಡಿಸಿದೆ ಎಂದು ವಿಜಯ್ ರಾಘವನ್ ತಿಳಿಸಿದ್ದಾರೆ. 

ಆಗಸ್ಟ್ 15ರೊಳಗೆ ದೇಶಿಯ ನಿರ್ಮಿತ ಕೋವಿಡ್-19 ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುವ ಉದ್ದೇಶದಿಂದ ಭಾರತ್ ಬಯೋಟೆಕ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುತ್ತಿರುವ ಕೋವಾಕ್ಸಿನ್ ಲಸಿಕೆಯನ್ನು ತ್ವರಿತಗತಿಯಲ್ಲಿ ಕ್ಲಿನಿಕಲ್ ಪ್ರಯೋಗ ನಡೆಸುವಂತೆ  ಐಸಿಎಂಆರ್ ಆಯ್ದು ವೈದ್ಯಕೀಯ ಸಂಸ್ಥೆ ಹಾಗೂ ಆಸ್ಪತ್ರೆಗಳಿಗೆ ಪತ್ರ ಬರೆದಿದೆ.

ಈ ಪತ್ರ ಕುರಿತಂತೆ ಪ್ರತಿಕ್ರಿಯಿಸಿದ ವಿಜಯ್ ರಾಘವನ್, ಇಂದಿನಿಂದ ಮಾನವ ಪ್ರಯೋಗದ ಮೊದಲ ಹಂತ ಆರಂಭವಾಗಿದೆ. ಇದು ಇನ್ನು ಎರಡು ಹಂತಗಳನ್ನು ದಾಟಬೇಕಾಗಿದೆ. ಆಗಸ್ಟ್ 15ರೊಳಗೆ ಹೇಗೆ ಬಿಡುಗಡೆಗೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ವಿದೇಶಗಳಲ್ಲಿ ಲಸಿಕೆ ಮೇಲಿನ ಮಾನವ ಪ್ರಯೋಗ ಮೊದಲ ಹಂತ ತಲುಪಿದ ನಂತರ ಮೂರನೇ ಹಂತ ತಲುಪಲು ಅನೇಕ ತಿಂಗಳುಗಳೇ ಬೇಕಾಗಲಿವೆ.ಸಾಂಕ್ರಾಮಿಕ ರೋಗಕ್ಕೆ ತ್ವರಿತಗತಿಯಲ್ಲಿ ಲಸಿಕೆ ಅಭಿವೃದ್ಧಿಪಡಿಸುವ ನಿಟ್ಟನಿಲ್ಲಿ ಜಾಗತಿಕ ನಿಯಮಗಳನ್ನು ಉಲ್ಲಂಘಿಸಬಾರದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com