ಸಂಗ್ರಹ ಚಿತ್ರ
ದೇಶ
ನೌಗಾಮ್ ಸೆಕ್ಟರ್ ನಲ್ಲಿ ಗಡಿ ನುಸುಳುತ್ತಿದ್ದ 2 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ನೌಗಾಮ್ ಸೆಕ್ಟರ್ನ ಹಂದ್ವಾರದ ಗಡಿ ನಿಯಂತ್ರಣ ರೇಖೆ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಸೇನಾಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಉಗ್ರರ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿ, ಇಬ್ಬರು ಉಗ್ರರನ್ನು ಇದೀಗ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಹತ್ಯೆಯಾದ ಉಗ್ರರಿಂದ 2 ಎಕೆ-47 ರೈಫಲ್ ಗಳು, ಸ್ಫೋಟ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

