ಭದ್ರತಾ ಪಡೆ ಯೋಧರ ಸಾಂದರ್ಭಿಕ ಚಿತ್ರ
ದೇಶ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್:ಇಬ್ಬರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸ್ರಿಗುಫ್ವಾರಾ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಅನಂತ್ ನಾಗ್(ಜಮ್ಮು-ಕಾಶ್ಮೀರ):ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸ್ರಿಗುಫ್ವಾರಾ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಇಂದು ನಸುಕಿನ ಜಾವ ಎನ್ ಕೌಂಟರ್ ಆರಂಭವಾಗಿದ್ದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನನ್ನು ಹತ್ಯೆಗೈಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸದ್ಯ ಪೊಲೀಸರು ಮತ್ತು ಭದ್ರತಾ ಪಡೆ ಯೋಧರು ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸ್ಥಳದಿಂದ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ