ಚೆನ್ನೈ: ತಮಿಳುನಾಡು ಸರ್ಕಾರ ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರದ ಮೇಲಿನ ನಿರ್ಬಂಧವನ್ನು ಜುಲೈ 31ರ ವರೆಗೆ ವಿಸ್ತರಿಸಿ ಸೋಮವಾರ ಆದೇಶ ಹೊರಡಿಸಿದೆ.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ತಮಿಳುನಾಡಿನಲ್ಲಿ ಜುಲೈ 15ರ ವರೆಗೆ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರವನ್ನು ನಿಷೇಧಿಸಲಾಗಿತ್ತು. ಇದೀಗ ಅದನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ.
ಕ್ಯಾಬ್ ಮತ್ತು ಆಟೋ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ತಮಿಳುನಾಡು ಸರ್ಕಾರ ಮನವಿ ಮಾಡಿದೆ.
ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಒಂದೇ ಬರೋಬ್ಬರಿ 4,328 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,42,798ಕ್ಕೆ ಏರಿಕೆಯಾಗಿದೆ.
Advertisement