ರಾಜಸ್ಥಾನ: ಸಚಿನ್ ಪೈಲಟ್ ವಜಾಗೊಳಿಸಿದ ನಂತರ ರಾಜ್ಯಪಾಲರನ್ನು ಭೇಟಿಯಾದ ಅಶೋಕ್ ಗೆಹ್ಲೋಟ್

ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರ ಇಬ್ಬರು ಸಚಿವರನ್ನು ವಜಾಗೊಳಿಸಿದ ನಂತರ ರಾಜಭವನಕ್ಕೆ ತೆರಳಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ , ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾದರು.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯಪಾಲ ಕಲ್ ರಾಜ್ ಮಿಶ್ರಾ
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯಪಾಲ ಕಲ್ ರಾಜ್ ಮಿಶ್ರಾ

ಜೈಪುರ: ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರ ಇಬ್ಬರು ಸಚಿವರನ್ನು ವಜಾಗೊಳಿಸಿದ ನಂತರ ರಾಜಭವನಕ್ಕೆ ತೆರಳಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ , ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾದರು.

ಮುಂಬರುವ ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ಕಲ್ ರಾಜ್ ಮಿಶ್ರಾ ಅವರಿಗೆ  ಅಶೋಕ್ ಗೆಹ್ಲೋಟ್ ಮಾಹಿತಿ ನೀಡಿದ್ದಾರೆ ಎಂಬುದು ತಿಳಿದುಬಂದಿದೆ.

ಸಚಿನ್ ಪೈಲಟ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ಹಾಗೂ ವಿಶ್ವೇಂದರ್ ಸಿಂಗ್, ರಮೇಶ್ ಮೀನಾ ಅವರನ್ನು ಸಂಪುಟದಿಂದ ವಜಾಗೊಳಿಸುವ ಕಾಂಗ್ರೆಸ್ ಪ್ರಸ್ತಾವವನ್ನು ರಾಜ್ಯಪಾಲ ಕಲ್ ರಾಜ್ ಮಿಶ್ರಾ ಸ್ವೀಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜಸ್ಥಾನ ಉಪ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ಕಾಂಗ್ರೆಸ್ ಪಕ್ಷ ಮಂಗಳವಾರ ವಜಾಗೊಳಿಸಿದೆ.ವಿಫ್ ಉಲ್ಲಂಘಿಸಿದ ಬಂಡಾಯ ನಾಯಕ ಹಾಗೂ ಅವರಿಗೆ  ಆಪ್ತರಾದ ವಿಶ್ವೇಂದ್ರ ಸಿಂಗ್ ಮತ್ತು ರಮೇಶ್ ಮೀನಾ ಅವರನ್ನು ರಾಜ್ಯ ಸಂಪುಟದಿಂದ ಕಿತ್ತು ಹಾಕಲಾಗಿದೆ.

ಈ ಮಧ್ಯೆ  ಟ್ವೀಟ್ ಮಾಡಿರುವ ಸಚಿನ್ ಪೈಲಟ್,  ಸತ್ಯಕ್ಕೆ ತೊಂದರೆಯಾಗಿರಬಹುದು, ಆದರೆ, ಸೋತಿಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com