ಸಚಿನ್ ಪೈಲಟ್ ಬಿಜೆಪಿ ಜತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ: ರಾಜಸ್ಥಾನ ಸಿಎಂ ಗೆಹ್ಲೋಟ್

ತಮ್ಮ ವಿರುದ್ಧ ಬಂಡಾಯವೆದ್ದಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಪೈಲಟ್ ಬಿಜೆಪಿ ಜೊತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ್: ತಮ್ಮ ವಿರುದ್ಧ ಬಂಡಾಯವೆದ್ದಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಪೈಲಟ್ ಬಿಜೆಪಿ ಜೊತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅಶೋಕ್ ಗೆಹ್ಲೋಟ್ ಅವರು, ನನ್ನ ಸರ್ಕಾರ ಬೀಳಿಸಲು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದ್ದು, ಇದಕ್ಕೆ ನನ್ನ ಬಳಿ ಸಾಕ್ಷ್ಯ ಇದೆ ಎಂದಿದ್ದಾರೆ. ಅಲ್ಲದೆ ಈ ಡೀಲ್ ನಲ್ಲಿ ಸ್ವತಃ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಸಚಿನ್ ಪೈಲಟ್ ಹೆಸರನ್ನು ನೇರವಾಗಿ ಪ್ರಸ್ತಾಪಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಇದೇ ವೇಳೆ ರಾಷ್ಟ್ರೀಯ ಮಾಧ್ಯಮಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಗೆಹ್ಲೋಟ್, ಮಾಧ್ಯಮಗಳು ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವವರ ಬೆಂಬಲಕ್ಕೆ ನಿಂತಿವೆ ಎಂದು ಆರೋಪಿಸಿದರು.

ಸಿಎಂ ವಿರುದ್ಧ ಬಂಡಾಯವೆದ್ದ ಸಚಿನ್ ಪೈಲಟ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com