

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1,652 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.
ಹೌದು.. ಕಳೆದ 24 ಗಂಟೆಗಳಲ್ಲಿ 1,652 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 118645ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಆರೋಗ್ಯ ಇಲಾಖೆ, ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 58 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 3545ಕ್ಕೆ ಏರಿಕೆಯಾಗಿದೆ. ಈ ನಡುವೆ ಇಂದು ಒಂದೇ ದಿನ 1994 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟಾರೆ 97693 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17407 ಕ್ಕೆ ಕುಸಿದಿದೆ.
ಅಂತೆಯೇ ದೆಹಲಿಯಲ್ಲಿ ಈ ವರೆಗೂ 7,56,661 ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು, ಇಂದು 5,896 RT-PCR ಟೆಸ್ಟ್ ಮಾಡಲಾಗಿದೆ. 14,329 ರ್ಯಾಪಿಡ್ ಆ್ಯಂಟಿ ಜೆನ್ ಟೆಸ್ಟ್ ಮಾಡಲಾಗಿದೆ.