ಮಹಾರಾಷ್ಟ್ರ: ಒಂದೇ ದಿನ 8,308 ಹೊಸ ಪ್ರಕರಣ ಪತ್ತೆ, 258 ಸಾವು; ಸೋಂಕಿತರ ಸಂಖ್ಯೆ 2,92,589ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 8,308 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,92,589ಕ್ಕೇರಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 8,308 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,92,589ಕ್ಕೇರಿದೆ.

ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇಂದು ಒಂದೇ ದಿನ 8,641 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,92,589ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 258 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 11,452ಕ್ಕೆ ಏರಿಕೆಯಾಗಿದೆ.

ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,60,357ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,20,48 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಗುಣಮುಖ ಪ್ರಮಾಣ ಶೇ.54.81ರಷ್ಟಿದ್ದು, ಮರಣ ಪ್ರಮಾಣ ಶೇ.3.91ರಷ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com