

ನವದೆಹಲಿ: ಪ್ರಸ್ತುತ ಕೋವಿಡ್-19 ಸೋಂಕು ಹರಡುತ್ತಿರುವ ರೀತಿಯಲ್ಲೆ ಹರಡಿದರೆ ಆಗಸ್ಟ್ 20 ರೊಳಗೆ ದೇಶದಲ್ಲಿ 20 ಲಕ್ಷಕ್ಕೂ
ಹೆಚ್ಚು ಪ್ರಕರಣಗಳು ಕಾಣಿಸಿಕೊಳ್ಳಲಿದ್ದು, ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು
ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿರುವ ರಾಹುಲ್ ಗಾಂಧಿ, ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಹೇಳಿಕೆಗಳನ್ನು ಪ್ರಶ್ನಿಸಿದ್ದಾರೆ.
ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದೆ. ಇದೇ ರೀತಿಯಲ್ಲಿ ಸೋಂಕು ಹರಡಿದರೆ ಆಗಸ್ಟ್ 10ರೊಳಗೆ 20 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಲಿದ್ದಾರೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ. ಸೋಂಕು ಹರಡದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ವಾರದಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಲಿದೆ ಎಂದು ಗುರುವಾರ ಮಾಡಿದ್ದ ಪೋಸ್ಟನ್ನು ರಾಹುಲ್ ಗಾಂಧಿ ರಿಟ್ವಿಟ್ ಮಾಡಿದ್ದಾರೆ.ಗುರುವಾರ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದ್ದು, 25 ಸಾವಿರ ಜನರು ಮೃತಪಟ್ಟಿದ್ದಾರೆ.