ಜಿತೇಂದ್ರ ಅಹ್ವಾದ್
ದೇಶ
ಪ್ಲಾಸ್ಮಾ ದಾನ ಮಾಡಲು ಮಹಾರಾಷ್ಟ್ರ ಸಚಿವ ಜಿತೇಂದ್ರ ಅಹ್ವಾದ್ ಮುಂದು
ಕೊರೋನಾ ಸೋಂಕಿನಿಂದ ಗುಣಮುಖವಾಗಿರುವ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅಹ್ವಾದ್ ಬೇರೆ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ.
ಮುಂಬಯಿ: ಕೊರೋನಾ ಸೋಂಕಿನಿಂದ ಗುಣಮುಖವಾಗಿರುವ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅಹ್ವಾದ್ ಬೇರೆ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ.
ಮುಂಬ್ರಾ-ಕಾಲ್ವಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಅಹ್ವಾದ್ ಅವರಿಗೆ ಮೇ ತಿಂಗಳಲ್ಲಿ ಕೊರೋನಾ ಸೋಂಕು ತಗುಲಿತ್ತು. ಅದಾದ ನಂತರ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.
ಕೊರೋನಾ ವಿರುದ್ಧ ಹೋರಾಡಿ ಚೇತರಿಸಿಕೊಂಡ 2 ತಿಂಗಳ ನಂತರ ತಮ್ಮ ಪ್ಲಾಸ್ಮಾವನ್ನು ಸರ್ಕಾರಿ ಆಸ್ಪತ್ರೆಗೆ ದಾನ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ. ಮುಂದಿನ 2 ದಿನಗಳಲ್ಲಿ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ. ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ಥೆರೆಪಿ ಮಾಡಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ