ತಿರುವನಂತಪುರಂನ ಕರಾವಳಿಯಲ್ಲಿ 10 ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಕೇರಳ ಸರ್ಕಾರ

ತಿರುವನಂತಪುರಂನ ಕೆಲವು ಪ್ರದೇಶಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸಮುದಾಯಕ್ಕೆ ಹರಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಹೇಳಿದ ಮಾರನೇ ದಿನವೇ ತಿರುವನಂತಪುರಂನ ಕರಾವಳಿ ಪ್ರದೇಶದಲ್ಲಿ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುವನಂತಪುರಂ: ತಿರುವನಂತಪುರಂನ ಕೆಲವು ಪ್ರದೇಶಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸಮುದಾಯಕ್ಕೆ ಹರಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಹೇಳಿದ ಮಾರನೇ ದಿನವೇ ತಿರುವನಂತಪುರಂನ ಕರಾವಳಿ ಪ್ರದೇಶದಲ್ಲಿ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.

ಜಿಲ್ಲಾ ಆಡಳಿತ ಕರಾವಳಿ ಪ್ರದೇಶವನ್ನು ಕ್ರಿಟಿಕಲ್ ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಿದ್ದು, ಈ ಪ್ರದೇಶದಲ್ಲಿ ಜುಲೈ 18ರಿಂದ ಜುಲೈ 28ರ ವರೆಗೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಳಿಸಿದೆ.

ಕೊರೋನಾ ವೈರಸ್ ಚೈನ್ ಬ್ರೇಕ್ ಮಾಡುವುದಕ್ಕಾಗಿ 10 ದಿನಗಳ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಅವರು ಹೇಳಿದ್ದಾರೆ.

ನಿನ್ನೆಯಷ್ಟೇ ತಿರುವನಂತಪುರಂನ ಪುಲ್ಲುವಿಲಾ ಮತ್ತು ಪೂಂಟುರಾ ಎಂಬ ಗ್ರಾಮಗಳಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಎರಡು ಗ್ರಾಮಗಳಲ್ಲಿ ಸೋಂಕು ಸಮುದಾಯಕ್ಕೆ ಹರಡಿದೆ ಎಂದು ಸಿಎಂ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com