ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಹಾರಾಷ್ಟ್ರಕ್ಕೆ ಕೊರೋನಾಘಾತ: ರಾಜ್ಯದಲ್ಲಿ 3 ಲಕ್ಷ ದಾಟಿದ ಸೋಂಕು, ಮುಂಬೈನಲ್ಲೇ 1 ಲಕ್ಷ ಸೋಂಕಿತರು!

ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಇಂದು ಹೊಸದಾಗಿ 8,348 ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಇಂದು ಹೊಸದಾಗಿ 8,348 ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ. 

ರಾಜ್ಯದಲ್ಲಿ ಇಂದು 144 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಮುಂಬೈನಲ್ಲಿ 56 ಮಂದಿ ಮೃತಪಟ್ಟಿದ್ದು ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 11,596ಕ್ಕೆ ಏರಿಕೆಯಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಮಹಾರಾಷ್ಟ್ರದ ರಾಜಧಾನಿ ಮುಂಬೈ ಒಂದರಲ್ಲೇ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದೆ. ರಾಜ್ಯದಲ್ಲಿ ಪ್ರಸ್ತುತ 1,26,926 ಸಕ್ರಿಯ ಪ್ರಕರಣಗಳಿದ್ದು 1,65,665 ಮಂದಿ ಗುಣಮುಖರಾಗಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com