ಬಿಹಾರದಲ್ಲಿ ಸಿಡಿಲು ಬಡಿದು 10 ಮಂದಿ ಸಾವು: ತಲಾ 4 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬಿಹಾರದ ಏಳು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಘಟನೆಗಳಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ ಪರಿಹಾರ ಪ್ರಕಟಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಪಾಟ್ನಾ: ಬಿಹಾರದ ಏಳು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಘಟನೆಗಳಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ ಪರಿಹಾರ ಪ್ರಕಟಿಸಿದ್ದಾರೆ.

ದುರಂತಗಳಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ನಿತೀಶ್‍ ಕುಮಾರ್ ಹೇಳಿದ್ದಾರೆ.

ದುರಂತದ ಈ ಸಮಯದಲ್ಲಿ ದುಃಖತಪ್ತ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರ ನಿಂತಿದೆ ಎಂದಿರುವ ನಿತೀಶ್ ಕುಮಾರ್, ಪ್ರತಿಕೂಲ ವಾತಾವರಣದಲ್ಲಿ ಜನರು ಜಾಗರೂಕರಾಗಿರಬೇಕಿದ್ದು, ಮನೆಗಳಲ್ಲೇ ಇರುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ, ವಿಪತ್ತು ನಿರ್ವಹಣಾ ಇಲಾಖೆ ಕಾಲ ಕಾಲಕ್ಕೆ ನೀಡುತ್ತಿರುವ ಸಲಹೆಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com