ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ 250 ಅತಿಥಿಗಳು ಭಾಗಿ ಸಾಧ್ಯತೆ

ಆಗಸ್ಟ್ 5 ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ 250 ಅತಿಥಿಗಳು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಆಗಸ್ಟ್ 5 ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ 250 ಅತಿಥಿಗಳು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಜೀ ನ್ಯೂಸ್ ನ ವರದಿಯ ಪ್ರಕಾರ ಅಯೋಧ್ಯೆಯ ಪ್ರಮುಖ ಸನ್ಯಾಸಿಗಳು ರಾಮ ಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿರಿಯ ವ್ಯಕ್ತಿಗಳು ಭೂಮಿ ಪೂಜೆ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. 

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಗಳು, ವಿಶ್ವ ಹಿಂದೂಪರಿಷತ್ ನ ಪದಾಧಿಕಾರಿಗಳನ್ನೂ ಸಹ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿಂದ ಆಹ್ವಾನ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಕೇಂದ್ರ ಸಚಿವರು ಹಾಗೂ ಉತ್ತರ ಪ್ರದೇಶದ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.  ಕೊರೋನಾ ಹಿನ್ನೆಲೆಯಲ್ಲಿ ಅತ್ಯಂತ ಕಡಿಮೆ ಜನರಿಗೆ ಮಾತ್ರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com