ಕೋವಿಡ್-19: ದೇಶದಲ್ಲಿ ಒಂದೇ ದಿನ 37,148 ಕೇಸ್, 28,084 ಸಾವು; ಸೋಂಕಿತರ ಸಂಖ್ಯೆ 11.5 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಮಂಗಳವಾರ ಹೊಸದಾಗಿ 37,148 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಮಂಗಳವಾರ ಹೊಸದಾಗಿ 37,148 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 587 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ 28084 ಮಂದಿಯನ್ನು ಬಲಿ ಪಡೆದುಕೊಂಡಿದೆ. 

ಇನ್ನು 11,55,191 ಮಂದಿ ಸೋಂಕಿತರ ಪೈಕಿ 7,24,578 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿನ್ನೂ 4,02,529 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಎಂದಿನಂತೆ ಮಹಾರಾಷ್ಟ್ರದಲ್ಲಿ ನಿನ್ನೆ ಅತೀ ಹೆಚ್ಚು 8240 ಪ್ರಕರಣ ದಾಖಲಾಗಿದ್ದು, 176 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ತಮಿಳುನಾಡಿನಲ್ಲಿ 4985 ಕೇಸು, 70 ಸಾವು, ದೆಹಲಿಯಲ್ಲಿ 954 ಕೇಸು 35 ಸಾವು, ಕರ್ನಾಟಕದಲ್ಲಿ 3684 ಕೇಸು 72 ಸಾವು, ಆಂಧ್ರಪ್ರದೇಶದಲ್ಲಿ 7074 ಕೇಸು, 54 ಸಾವು ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com