

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 3,43,243 ಮಂದಿಯ ಮಾದರಿಗಳನ್ನು ಪರೀಕ್ಷೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಬುಧವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದೇಶಾದ್ಯಂತ3,43,243 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.21ರವರೆಗೂ 1,47,24, 546 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ದೇಶದಲ್ಲಿ ಬುಧವಾರ ಹೊಸದಾಗಿ 37,148 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,92,915ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 648 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ 28,732 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.