

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,50,823 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,50,823 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.22ರವರೆಗೂ 1,50,75,369 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ಗುರುವಾರ ಒಂದೇ ದಿನ 45,000ಕ್ಕೂ ಹೆಚ್ಚು ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,239,684ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,120 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 29,890ಕ್ಕೆ ತಲುಪಿದೆ.