ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ ಬರೋಬ್ಬರಿ 6,988 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.
ತಮಿಳುನಾಡಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,06,737ಕ್ಕೆ ಏರಿಕೆಯಾಗಿದ್ದು, ಇಂದು ಒಂದೇ ದಿನ ಮಹಾಮಾರಿಗೆ 89 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 3409ಕ್ಕೆ ಏರಿಕೆಯಾಗಿದೆ.
ಹೊಸ ಪಾಸಿಟಿವ್ ಪ್ರಕರಣಗಳಿಂದ ಚೇತರಿಕೆ ಪ್ರಮಾಣ ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 7758 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಚೇತರಿಸಿಕೊಂಡವರ ಸಂಖ್ಯೆ 1,51,055ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಇಂದು 1329 ಹೊಸ ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 93,537ಕ್ಕೆ ಏರಿಕೆಯಾಗಿದೆ.
Advertisement