

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4,20,898 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 4,20,898 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.24 ರವರೆಗೂ 1,58,49,068 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ದೇಶದಲ್ಲಿ ಶನಿವಾರ ಹೊಸದಾಗಿ 48,916 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 757 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ 31,358 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.