ದೇಶಾದ್ಯಂತ ಒಂದೇ ಸಮಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಆಗುವುದಿಲ್ಲ: ತಜ್ಞರು

ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಏಕಸಮಯದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಆಗುವುದಿಲ್ಲ ಎಂದು ಸಾರ್ವಜನಿಕ ಆರೋಗ್ಯದ ತಜ್ಞರೊಬ್ಬರು ಹೇಳಿದ್ದಾರೆ.
ಕೋವಿಡ್ ಕೇರ್ ಸೆಂಟರ್
ಕೋವಿಡ್ ಕೇರ್ ಸೆಂಟರ್

ಹೈದರಾಬಾದ್: ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಏಕಸಮಯದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಆಗುವುದಿಲ್ಲ ಎಂದು ಸಾರ್ವಜನಿಕ ಆರೋಗ್ಯದ ತಜ್ಞರೊಬ್ಬರು ಹೇಳಿದ್ದಾರೆ.

ಈ ತಿಂಗಳ ಅಂತ್ಯ ಅಥವಾ ಆಗಸ್ಟ್ ಆರಂಭದಲ್ಲಿ ದೆಹಲಿಯಂತಹ ರಾಷ್ಟ್ರಗಳಲ್ಲಿ ಸೋಂಕು ಹೆಚ್ಚಾಗಬಹುದು, ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಸೋಂಕಿನ ಸಂಖ್ಯೆ ಜಾಸ್ತಿಯಾಗಬಹುದು ಎಂದು ಭಾರತೀಯ ಸಾರ್ವಜನಿಕ ಆರೋಗ್ಯ ಸಂಸ್ಥೆ (ಐಐಪಿಹೆಚ್) ನಿರ್ದೇಶಕ ಪ್ರೊಫೆಸರ್ ಜಿ.ವಿ. ಎಸ್. ಮೂರ್ತಿ ಹೇಳಿದ್ದಾರೆ.

ಜಾರ್ಖಂಡ್ ನಂತರ ರಾಜ್ಯಗಳಲ್ಲಿ ಸೋಂಕು ಹರಡಲು ಧೀರ್ಘ ಸಮಯ ತೆಗೆದುಕೊಳ್ಳಲಿದೆ. ವಲಸೆ ಕಾರ್ಮಿಕರೆಲ್ಲರೂ ಹಿಂತಿರುಗಿದ ಬಳಿಕ ಸೋಂಕು ಹರಡಲು ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.ನಿರ್ದಿಷ್ಠ ರಾಜ್ಯದ ಜನರು ಸೋಂಕಿನ ಬಗ್ಗೆ ಯಾವ ರೀತಿ ಬಹಿರಂಗಪಡಿಸುತ್ತಾರೋ ಆಧಾರದ ಮೇಲೆ ಪ್ರತಿಯೊಂದು ರಾಜ್ಯಗಳು ತನ್ನದೇ ಆದ ಹಾದಿಯನ್ನು ಹೊಂದಿರುತ್ತವೆ. ದೇಶಾದ್ಯಂತ ಏಕರೀತಿಯಲ್ಲಿ ಸೋಂಕು ಪ್ರಮಾಣ ಹೆಚ್ಚು ಆಗಲ್ಲ ಎಂದು ಅವರು ಹೇಳಿದ್ದಾರೆ.

ಮುಂಬೈ, ದೆಹಲಿಯಂತಹ ನಗರಗಳಿಂದ ವಲಸೆ ಕಾರ್ಮಿಕರು ಹಿಂತಿರುಗಿದ ನಂತರ ಬಿಹಾರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಯಿತು. ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಕುಟುಂಬಕ್ಕೆ ಹರಡಲು 10ರಿಂದ 14 ದಿನ ತೆಗೆದುಕೊಳ್ಳಲಿದೆ ಎಂದು ಮೂರ್ತಿ ತಿಳಿಸಿದ್ದಾರೆ.

ಹರಿಯಾಣ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡಿನಂತಹ ರಾಜ್ಯಗಳಲ್ಲಿ ಸೆಪ್ಟೆಂಬರ್ ಮಧ್ಯಭಾಗದಿಂದ
ಗರಿಷ್ಠ ಸಂಖ್ಯೆಯ ಸೋಂಕು ಪ್ರಕರಣಗಳು ಕಂಡುಬರುವ ಸಾಧ್ಯತೆಯಿದೆ. ಕೆಲ ರಾಜ್ಯಗಳಲ್ಲಿ ಆಗಸ್ಟ್ ಮಧ್ಯಭಾಗದಿಂದ ಸೋಂಕು
ತುತ್ತ ತುದಿಯನ್ನು ಏರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ. 

ಹಠಾತ್ತನೆ ಸೋಂಕಿನ ಪ್ರಕರಣ ಹೆಚ್ಚಾದರೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಜನಸಾಂದ್ರತೆ ಹೆಚ್ಚಿರುವ ಕಡೆಗಳಲ್ಲಿ ಸಂಪೂರ್ಣವಾಗಿ ನಿಗಾವಹಿಸಬೇಕಾಗಿದೆ. ಅಲ್ಲಿ ಸೋಂಕಿನ ಪ್ರಮಾಣ
ಕಡಿಮೆಗೊಳಿಸುವ ನಿಟ್ಟಿನಲ್ಲಿ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಮಾಸ್ಕ್ ಧರಿಸುವುದು, ಕೈ ತೊಳೆಯುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯಂತಹ ಮುನ್ನಚ್ಚೆರಿಕಾ ಕ್ರಮಗಳನ್ನು
ಜನ ಸಮುದಾಯ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಮೂರ್ತಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com