ಆ.5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ: ಅಡ್ವಾಣಿ, ಭಾಗವತ್ ಸೇರಿ ಹಲವರಿಗೆ ಆಹ್ವಾನ

ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂಎಂ ಜೋಶಿ...
ಎಲ್ ಕೆ ಅಡ್ವಾಣಿ
ಎಲ್ ಕೆ ಅಡ್ವಾಣಿ

ಪುಣೆ: ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂಎಂ ಜೋಶಿ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ ಎಂದು ಭಾನುವಾರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸದಸ್ಯರು ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಲ್ಲಾ ಧರ್ಮಗಳ ಆಧ್ಯಾತ್ಮಿಕ ಮುಖಂಡರನ್ನು ಆಹ್ವಾನಿಸುವ ದೃಷ್ಟಿಕೋನವೂ ಇದೆ ಎಂದು ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು 200ಕ್ಕೂ ಹೆಚ್ಚು ಜನರಿಗೆ ಅವಕಾಶ ಇರುವುದಿಲ್ಲ. ಶಿಲಾನ್ಯಾಸ ಕಾರ್ಯಕ್ರಮ ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣದ 'ಭೂಮಿ ಪೂಜೆ' ನೆರವೇರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com