ನನ್ನ ಆರೋಗ್ಯ ಉತ್ತಮವಾಗಿ: ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್'ಗೆ ಸಿಎಂ ಚೌಹಾಣ್ ಸಲ್ಯೂಟ್

ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್'ಗೆ ಸಲ್ಯೂಟ್ ಹೊಡೆದಿದ್ದಾರೆ. 
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್'ಗೆ ಸಲ್ಯೂಟ್ ಹೊಡೆದಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ. ಕೊರೋನಾ ವಾರಿಯರ್ಸ್ ಗಳ ಸೇವೆ ಶ್ಲಾಘನೀಯವಾದದ್ದು. ಕೊರೋನಾ ಸೋಂಕಿತರಿಗಾಗಿ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್'ಗೆ ಸಲ್ಯೂಟ್ ಹೊಡೆಯುತ್ತೇನೆಂದು ತಿಳಿಸಿದ್ದಾರೆ. 

ಕೊರೋನಾ ಬಂದೆಂದು ಭೀತಿಗೊಳಗಾಗಬಾರದು, ಗುಣಮುಖರಾಗುತ್ತೇವೆಂಬ ವಿಶ್ವಾಸದೊಂದಿಗೆ ಹೋರಾಟ ಮಾಡುತ್ತೇವೆ. ಎರಡು ಗಜಗಳಷ್ಟು ಅಂತರ ಕಾಯ್ದುಕೊಳ್ಳುವುದು, ಸ್ವಚ್ಛತೆ ಕಾಪಾಸಿಕೊಳ್ಳುವುದು ಕೊರೋನಾ ವಿರುದ್ಧದ ದೊಡ್ಡ ಅಸ್ತ್ರವಾಗಿದೆ. ಪ್ರತೀಯೊಬ್ಬರೂ ಈ ಅಸ್ತ್ರವನ್ನು ಬಳಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದಿದ್ದಾರೆ. 

ಕೊರೋನಾ ಬಂದ ಕೂಡಲೇ ಜನರು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸೋಂಕು ತಗುಲಿದ ಕೂಡಲೇ ಆತಂಕಕ್ಕೊಳಗಾಗಬೇಡಿ. ಸೋಂಕು ತಗುಲಿರುವುದನ್ನು ಮುಚ್ಚಿಡಬೇಡಿ, ಆರೋಗ್ಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಚಿಕಿತ್ಸೆ ಪಡೆದುಕೊಳ್ಳಿ. ಸಕಾಲಕ್ಕೆ ತೆಗೆದುಕೊಳ್ಳುವ ಚಿಕಿತ್ಸೆ ಆರೋಗ್ಯವಾಗಿರುವಂತೆ ಮಾಡುತ್ತದೆ. ಬಹಳ ಎಚ್ಚರದಿಂದಿರಿ. ಎಲ್ಲರೂ ಸುರಕ್ಷಿತ ಹಾಗೂ ಆರೋಗ್ಯವಾಗಿರುವಂತೆ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com